ADVERTISEMENT

ಗೌರಿಬಿದನೂರು | ನಶೆಯಲ್ಲಿ ತಮ್ಮನ ಮುಂಗೈ ಕತ್ತರಿಸಿದ ಅಣ್ಣ

​ಪ್ರಜಾವಾಣಿ ವಾರ್ತೆ
Published 7 ಮೇ 2020, 9:18 IST
Last Updated 7 ಮೇ 2020, 9:18 IST
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಹನುಮಂತ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಹನುಮಂತ    

ಗೌರಿಬಿದನೂರು: ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ಬುಧವಾರ ಪಾನಮತ್ತ ಸಹೋದರರ ಗಲಾಟೆಯಲ್ಲಿ ಅಣ್ಣ ತಮ್ಮನ ಮುಂಗೈ ಕತ್ತರಿಸಿದ್ದಾನೆ.

ಗಾಯಾಳು ಹನುಮಂತ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈ ಕತ್ತರಿಸಿದ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಸಿಪಿಐ ರವಿ ಹಾಗೂ ಪಿಎಸ್ಐ ಅವಿನಾಶ್​ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.