ಗೌರಿಬಿದನೂರು: ನಗರದ ಹೊರವಲಯದ ಸಮಾನತಾ ಸೌಧದ ಆವರಣದಲ್ಲಿ ಆ.24 ರಂದು ಡಾ.ಎಚ್.ಎನ್.ಅಭಿವೃದ್ಧಿ ಪ್ರಾಧಿಕಾರದಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಚ್.ಎನ್ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 75ಕ್ಕೂ ಹೆಚ್ಚು ಬೃಹತ್ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ನಿರುದ್ಯೋಗಿಗಳು ಈ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೇದಲವೇಣಿ ವೇಣು, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.