ADVERTISEMENT

ಗೌರಿಬಿದನೂರು | ಅಪಘಾತ: ಸಂಚಾರ ನಿಯಂತ್ರಕ ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:12 IST
Last Updated 27 ಫೆಬ್ರುವರಿ 2026, 7:12 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಗೌರಿಬಿದನೂರು: ತಾಲ್ಲೂಕಿನ ಡಿ. ಪಾಳ್ಯ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದು ಕೆಎಸ್ಆರ್‌ಟಿಸಿ ಸಂಚಾರ ನಿಯಂತ್ರಕ ಶ್ರೀನಿವಾಸ್ (58) ಮೃತಪಟ್ಟಿದ್ದಾರೆ.

ADVERTISEMENT

ಗೌರಿಬಿದನೂರು ಕೆಎಸ್ಆರ್‌ಟಿಸಿ ಡಿಪೊದಲ್ಲಿ ಬುಧವಾರ ರಾತ್ರಿ 9.30ಕ್ಕೆ ಕೆಲಸ ಮುಗಿಸಿಕೊಂಡು ವಾಟಾದಹೊಸಹಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ನಗರದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿ ನವೀನ್ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.