
ಗೌರಿಬಿದನೂರು: ತಾಲ್ಲೂಕಿನ ನಗರಗೆರೆ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡ ಕೊಲೆ ಮಾಡಿದ್ದಾನೆ.
‘ಕುಡಿದು ಮನೆಗೆ ದಿನಾ ತಡವಾಗಿ ಬರ್ತೀಯ’ ಎಂದು ಕೇಳಿದ್ದಕ್ಕೆ ಪ್ರೀತಿಸಿ ಮದುವೆಯಾದ ಹೆಂಡತಿ ನವ್ಯಶ್ರೀ (19) ಅವರನ್ನು ಗಂಡ ಸತೀಶ್ ಕುಮಾರ್ ಭಾನುವಾರ ಕೊಲೆ ಮಾಡಿದ್ದಾನೆ.
ಸತೀಶ್ ಕುಮಾರ್ 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ರಾತ್ರಿ ಕುಡಿದು ಮತ್ತಿನಲ್ಲೇ ಮನೆಗೆ ಬಂದಿದ್ದಾನೆ. ಪ್ರತಿನಿತ್ಯ ಕುಡಿದು ತಡವಾಗಿ ಮನೆಗೆ ಬರ್ತೀಯಾ ಯಾಕೆ ಎಂದು ಹೆಂಡತಿ ಪ್ರಶ್ನಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಹೆಂಡತಿ ನವ್ಯಶ್ರೀ ರಾಡ್‌ನಿಂದ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ನವ್ಯಾಶ್ರೀಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಸಾವನ್ನಪ್ಪಿದ್ದಾಳೆ.
ಘಟನೆ ಬಳಿಕ ಸತೀಶ್ ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಸಿಪಿಐ ಅಂಜನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.