ADVERTISEMENT

ಗೌರಿಬಿದನೂರು: ನಾರಾಯಣಪ್ಪ ಕೆರೆ ಪುನಶ್ಚೇತನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 3:15 IST
Last Updated 12 ಫೆಬ್ರುವರಿ 2026, 3:15 IST
ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ವೆಂಕಟಾಪುರ ನಾರಾಯಣಪ್ಪನ ಕೆರೆ ಪುನಶ್ಚೇತನಕ್ಕೆ ಬುಧವಾರ ಚಾಲನೆ ನೀಡಲಾಯಿತು
ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ವೆಂಕಟಾಪುರ ನಾರಾಯಣಪ್ಪನ ಕೆರೆ ಪುನಶ್ಚೇತನಕ್ಕೆ ಬುಧವಾರ ಚಾಲನೆ ನೀಡಲಾಯಿತು   

ಗೌರಿಬಿದನೂರು: ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ತಾಲ್ಲೂಕಿನ ವೆಂಕಟಾಪುರ ಗ್ರಾಮದ ನಾರಾಯಣಪ್ಪ ಕೆರೆ ಪುನಶ್ಚೇತನ ಕಾರ್ಯಕ್ಕೆ ಗಂಗಾ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು. 

ಸಂಘದ ಗೌರವ ಅಧ್ಯಕ್ಷ ಸಂಜೀವ್ ರೆಡ್ಡಿ ಮಾತನಾಡಿ, ‘ಜಲಮೂಲ ರಕ್ಷಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಸಂಕಲ್ಪದೊಂದಿಗೆ ಪ್ರತಿಷ್ಠಾನವು ನಾಲ್ಕು ವರ್ಷಗಳಿಂದ ಕೆರೆಗಳ ರಕ್ಷಣೆಗೆ ಮುಂದಾಗಿದೆ. ಈ ಕಾರ್ಯಕ್ಕೆ ಸ್ಥಳೀಯ ರೈತರು, ಕೆರೆ ಅಚ್ಚುಕಟ್ಟದಾರರು ಮತ್ತು ಗ್ರಾಮಸ್ಥರನ್ನು ಒಳಗೊಳ್ಳಲಾಗಿದೆ’ ಎಂದರು. 

ಈ ವೇಳೆ ಗೌರಿಬಿದನೂರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ವೇಣು, ನರಸಿಂಹರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಆನಂದರೆಡ್ಡಿ , ಆಶ್ವತ್ಥಮ್ಮ, ರವಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.