ಗೌರಿಬಿದನೂರು: ತಂದೆ ಸಾವಿಗೆ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ನಾಗಯ್ಯರೆಡ್ಡಿ ಬಡಾವಣೆಯಲ್ಲಿ ನಡೆದಿದೆ.
ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್‌ಸಿ ಓದುತ್ತಿದ್ದ ಸ್ವರ್ಣ (22) ಮೃತರು. ಮೂರು ತಿಂಗಳ ಹಿಂದೆ ಸ್ವರ್ಣ ಅವರ ತಂದೆ ನಿಧನರಾಗಿದ್ದರು. ಇದರಿಂದ ಮನನೊಂದಿದ್ದ ವಿದ್ಯಾರ್ಥಿನಿ, ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.