ಚಿಕ್ಕಬಳ್ಳಾಪುರ: ಜರ್ಮನಿಯ ಬಾನ್‌ನಲ್ಲಿ ಆ.24 ರಿಂದ 29 ರವರೆಗೆ ನಡೆಯಲಿರುವ ಪ್ರತಿಷ್ಠಿತ ಗ್ಲೋಬಲ್ ಚೇಂಜ್‌ಮೇಕರ್ ಅಕಾಡೆಮಿ ಫಾರ್ ಪಾರ್ಲಿಮೆಂಟೇರಿಯನ್ಸ್ (ಜಿ-ಸಿಎಪಿ) ಸಮಾವೇಶದಲ್ಲಿ ಸಂಸದ ಡಾ.ಕೆ.ಸುಧಾಕರ್ ಪಾಲ್ಗೊಳ್ಳಲಿದ್ದಾರೆ.
ಯುನೈಟೆಡ್ ನೇಷನ್ಸ್ ಸಿಸ್ಟಮ್ ಸ್ಟಾಫ್ ಕಾಲೇಜು, ಯುನೈಟೆಡ್ ನೇಷನ್ಸ್ ಕನ್ವೆನ್ಷನ್ ಟು ಕಾಂಬ್ಯಾಟ್ ಡೆಸರ್ಟಿಫಿಕೇಶನ್ (ಯುಎನ್‌ಸಿಸಿಡಿ) ಮತ್ತು ಜಿ–20 ಗ್ಲೋಬಲ್ ಲ್ಯಾಂಡ್ ಇನಿಶಿಯೇಟಿವ್ ಆಶ್ರಯದಲ್ಲಿ ಈ ಜಾಗತಿಕ ಸಮಾವೇಶ ಆಯೋಜಿಸಲಾಗಿದೆ.
ಇಲ್ಲಿ ವಿವಿಧ ದೇಶಗಳ ಕಾನೂನು ರೂಪಿಸುವವರನ್ನು ಒಂದುಗೂಡಿಸಲಿದೆ. ಸುಸ್ಥಿರ ಅಭಿವೃದ್ಧಿ, ಭೂ ರಕ್ಷಣೆ, ಹವಾಮಾನ ನಿರ್ವಹಣೆ ಮತ್ತು ನೀತಿಗಳ ಆವಿಷ್ಕಾರ ದಂತಹ ವಿಷಯಗಳ ಕುರಿತು ಚರ್ಚೆಯಾಗಲಿದೆ.
ಪರಿಸರ ಸಂರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಗ್ರಾಮೀಣಾಭಿವೃದ್ಧಿ ಮತ್ತು ಸುಸ್ಥಿರ ಕೃಷಿಯಂತಹ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಈ ಅಂತರರಾಷ್ಟ್ರೀಯ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಕೆ.ಸುಧಾಕರ್ ಅವರು, ಈ ಆಹ್ವಾನ ಪಡೆದ ಭಾರತದ ಏಕೈಕ ಸಂಸದರಾಗಿದ್ದಾರೆ.
‘ಈ ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿ ಸುವುದು ಬಹಳ ಹೆಮ್ಮೆಯ ಸಂಗತಿ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಭಾರತವು ಹವಾಮಾನ ನಿರ್ವಹಣೆ, ಭೂ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ವಿಷಯ ಗಳಲ್ಲಿ ಮಹತ್ವಕಾಂಕ್ಷೆಯ ಗುರಿಗಳನ್ನು ಹೊಂದಿದೆ’ ಎಂದು ಡಾ.ಕೆ.ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.