ADVERTISEMENT

ದುರ್ಬಲರಿಗೆ ನ್ಯಾಯ ಕೊಡಿಸಿ- ಲಕ್ಷ್ಮಿಕಾಂತ್ ಜಾನಕಿರಾಮ್‍ ಮಿಸ್ಕಿನ್

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 2:58 IST
Last Updated 27 ಆಗಸ್ಟ್ 2021, 2:58 IST
ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ನ್ಯಾಯಾಧೀಶ ಲಕ್ಷ್ಮಿಕಾಂತ್ ಜಾನಕಿರಾಮ್‍ ಮಿಸ್ಕಿನ್ ಚಾಲನೆ ನೀಡಿದರು
ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ನ್ಯಾಯಾಧೀಶ ಲಕ್ಷ್ಮಿಕಾಂತ್ ಜಾನಕಿರಾಮ್‍ ಮಿಸ್ಕಿನ್ ಚಾಲನೆ ನೀಡಿದರು   

ಚಿಕ್ಕಬಳ್ಳಾಪುರ: ಯುವ ವಕೀಲರು ದುರ್ಬಲರಿಗೆ, ಅಸಹಾಯಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಜಾನಕಿರಾಮ್‍ ಮಿಸ್ಕಿನ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಿದ್ಧರಾಮಯ್ಯ ಕಾನೂನು ಕಾಲೇಜಿನಿಂದ ಬುಧವಾರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂತ್ರಸ್ತರ ಪರಿಹಾರ ಯೋಜನೆ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

2013ರಲ್ಲಿ ನಿರ್ಭಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆರೋಪಿಗಳಿಗೆ ಶಿಕ್ಷೆ ನೀಡುವುದರ ಜೊತೆಗೆ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಕ್ರಮವಹಿಸಿದೆ. ಸಂತ್ರಸ್ತರಿಗೆ ಕಾನೂನು ನೆರವು, ಆತ್ಮಸ್ಥೈರ್ಯ, ಸಾಂತ್ವನ ಹಾಗೂ ನ್ಯಾಯ ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಪ್ರಾಧಿಕಾರ ಕೆಲಸ ಮಾಡುತ್ತಿದೆ ಎಂದರು.

ADVERTISEMENT

ಕಾಲೇಜಿನ ಪ್ರಾಂಶುಪಾಲರಾದ ಪವಿತ್ರಾ, ವಕೀಲರಾದ ಶ್ರೀನಾಥ್, ಮಂಜುನಾಥ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.