ADVERTISEMENT

ಗೌರಿಬಿದನೂರು: 30 ಗ್ರಾಂ ಚಿನ್ನ, ಅರ್ಧ ಕೆ.ಜಿ ಬೆಳ್ಳಿ ದೋಚಿದ ಕಳ್ಳರು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 4:16 IST
Last Updated 8 ಫೆಬ್ರುವರಿ 2026, 4:16 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಗೌರಿಬಿದನೂರು: ನಗರದ ಡಿಆರ್‌ಎಂ ಲೇಔಟ್‌ನಲ್ಲಿ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗುರುವಾರ ರಾತ್ರಿ ಮನೆ ಬಾಗಿಲು ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು 30 ಗ್ರಾಂ ಚಿನ್ನ, ಅರ್ಧ ಕೆ.ಜಿಯಷ್ಟು ಬೆಳ್ಳಿ ಮತ್ತು ₹46 ನಗರದು ದೋಚಿ ಪರಾರಿಯಾಗಿದ್ದಾರೆ. 

ತಾವು ಮನೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ತಿರುಪತಿಯಿಂದ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ವಿಳಂಬವಾಗಿದೆ ಎಂದು ಮನೆಯ ಮಾಲೀಕ ಹರೀಶ್ ಕುಮಾರ್ ತಿಳಿಸಿದ್ದಾರೆ. 

ADVERTISEMENT

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.