ADVERTISEMENT

ಬೆಂಕಿಗೆ ಆಹುತಿಯಾದರಾಗಿ: ಪರಿಹಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 6:56 IST
Last Updated 2 ಫೆಬ್ರುವರಿ 2023, 6:56 IST
ಬೆಂಕಿಗೆ ರಾಗಿ ಹಾಗೂ ರಾಗಿ ಹುಲ್ಲು ನಾಶವಾಗಿದ್ದು ರೈತನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಶಿಡ್ಲಘಟ್ಟದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು
ಬೆಂಕಿಗೆ ರಾಗಿ ಹಾಗೂ ರಾಗಿ ಹುಲ್ಲು ನಾಶವಾಗಿದ್ದು ರೈತನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಶಿಡ್ಲಘಟ್ಟದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು   

ಶಿಡ್ಲಘಟ್ಟ: ಆಕಸ್ಮಿಕ ಬೆಂಕಿಗೆ ರಾಗಿ ಹಾಗೂ ರಾಗಿ ಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿದ್ದು ರೈತನಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ತಹಶೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಬಶೆಟ್ಟಹಳ್ಳಿ ಹೋಬಳಿಯ ಮರಿಹಳ್ಳಿ ಗ್ರಾಮದ ಹನುಮಪ್ಪ ಎಂಬ ರೈತ ತನ್ನ ಜಮೀನಿನಲ್ಲಿ ಬೆಳೆದ ರಾಗಿ ಕೊಯ್ಲು ಮಾಡಿ ಕುಪ್ಪೆ ಹಾಕಿದ್ದು ರಾಗಿಗೆ ಆಕಸ್ಮಿಕ ಬೆಂಕಿ ಬಿದ್ದು ಸುಮಾರು 50 ಕ್ವಿಂಟಲ್ ರಾಗಿ, 3 ಲೋಡ್‌ ರಾಗಿ ಹುಲ್ಲು ಸುಟ್ಟು ಕರಕಲಾಗಿದೆ. ಸರ್ಕಾರದಿಂದ ಕನಿಷ್ಠ ₹1 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುವ ಜತೆಗೆ ನಷ್ಟಕ್ಕೊಳಗಾಗಿರುವ ರೈತನಿಗೆ ಸರ್ಕಾರದಿಂದ ಸಿಗಬೇಕಿರುವ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ADVERTISEMENT

ತಾಲ್ಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನ್‌ಕುಮಾರ್, ಕಾರ್ಯಾಧ್ಯಕ್ಷ ವಿ.ಮುನಿಯಪ್ಪ, ಉಪಾಧ್ಯಕ್ಷ ಶ್ರೀನಿವಾಸ್, ಮಂಜುನಾಥ್, ಪ್ರಕಾಶ್, ಎಸ್.ಎನ್.ಮಾರಪ್ಪ, ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.