ADVERTISEMENT

ಮಕ್ಕಳ ಹಕ್ಕು ರಕ್ಷಣೆಗೆ ನ್ಯಾಯಾಂಗ ಬದ್ಧ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 6:58 IST
Last Updated 15 ನವೆಂಬರ್ 2025, 6:58 IST
ಗೌರಿಬಿದನೂರು ನಗರದ ವಿವೇಕಾನಂದ ಶಾಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದಿಂದ ಮಕ್ಕಳ ದಿನ ಆಚರಿಸಲಾಯಿತು 
ಗೌರಿಬಿದನೂರು ನಗರದ ವಿವೇಕಾನಂದ ಶಾಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದಿಂದ ಮಕ್ಕಳ ದಿನ ಆಚರಿಸಲಾಯಿತು    

ಗೌರಿಬಿದನೂರು: ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಪ್ರಯುಕ್ತ ನಗರದ ವಿವೇಕಾನಂದ ಶಾಲೆಯಲ್ಲಿ ಶುಕ್ರವಾರ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಯಿತು. 

ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ ಎನ್ ಮಾತನಾಡಿ, ‘ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಜವಾಬ್ದಾರಿ. ಮಕ್ಕಳ ಹಕ್ಕುಗಳ ರಕ್ಷಣೆಗೆ ನ್ಯಾಯಾಂಗ ಸದಾ ಬದ್ಧವಾಗಿರಲಿದೆ’ ಎಂದು ಹೇಳಿದರು. 

ಪೋಷಕರು ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣ ನೀಡಬೇಕು. ಶಿಕ್ಷಣ ಪಡೆಯುವ ಹಕ್ಕು ಎಲ್ಲ ಮಕ್ಕಳಿಗೆ ಇದೆ. ಇದನ್ನು ಸಂವಿಧಾನದಲ್ಲಿ ಸಹ ತಿಳಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಇದೇ ವೇಳೆ ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್, ದಾಳಪ್ಪ, ಮೂಕಾಂಬಿಕೆ, ನಂಜೇಗೌಡ, ಯಶೋದಮ್ಮ, ಗೋಪಾಲ್, ನರಸಿಂಹಮೂರ್ತಿ, ನಾಗರಾಜು, ವರದರಾಜುಲು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.