
ಗೌರಿಬಿದನೂರು: ತಾಲ್ಲೂಕಿನ ಕಲ್ಲೂಡಿ ಗ್ರಾಮದ ಕಲ್ಲಿನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಮಾದಿಗ ದಂಡೋರ ಹಾಗೂ ಭಾರತೀಯರ ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಭಾನುವಾರ ಏರ್ಪಡಿಸಲಾಯಿತು.
ಆದಿಜಾಂಬವ ಮಹಾಸಂಸ್ಥಾನ ಮಠ ಕೋಡಿಹಳ್ಳಿ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ದಂಪತಿಗಳ ಜೀವನದಲ್ಲಿ ಸಣ್ಣಪುಟ್ಟ ಗಲಾಟೆ, ಜಗಳ, ವೈಮನಸ್ಸು ಬರುವುದು ಸರ್ವೇ ಸಾಮಾನ್ಯ. ಎಲ್ಲವನ್ನೂ ಇಬ್ಬರೂ ಪ್ರೀತಿಯಿಂದ ಸ್ವೀಕರಿಸುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಮಾತನಾಡಿ, ವಿಚಾರವಾದಿಗಳು ಮತ್ತು ಬುದ್ದಿವಂತರು ಇಂತಹ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುತ್ತಾರೆ ಎಂದರು.
ಕರ್ನಾಟಕ ಮಾದಿಗ ದಂಡೋರ ರಾಜ್ಯ ಘಟಕದ ಅಧ್ಯಕ್ಷ ಎಂ. ಶಂಕರಪ್ಪ ಮಾತನಾಡಿ, ನವ ದಂಪತಿಗಳು ಯಾವುದೇ ಕಾರಣಕ್ಕೂ ಜಗಳವಾಡಬಾರದು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಸಮಿತಿ ರಾಷ್ಟ್ರ ಅಧ್ಯಕ್ಷ ಹೂಡಿ ರಾಮಚಂದ್ರ, ಅಮರ್, ಕಾಂತರಾಜು, ಪ್ರಕಾಶ್, ಕೃಷ್ಣಪ್ಪ, ವಿಜಯರಾಘವ, ಎ. ಗಂಗಾಧರಪ್ಪ, ರಾಮಾಂಜಿನಮ್ಮ, ಅರುಂಧತಿ, ನಾಗರಾಜ ನಾಯಕ್, ಬಾಬಣ್ಣ, ಮುನಿಯಪ್ಪ, ಮಲ್ಲಸಂದ್ರ ಗಂಗಾಧರಪ್ಪ, ಎಚ್.ಎಲ್. ವೆಂಕಟೇಶ್, ಜಿ. ನರಸಿಂಹಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.