
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಗೌರಿಬಿದನೂರು: ನಗರದ ಇಡಗೂರು ರಸ್ತೆಯಲ್ಲಿ ಮಂಗಳ ಬೆಳ್ಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಡಗೂರು ಗ್ರಾಮದ ನಾಗರಾಜು (37) ಮತ್ತು ಮಿಥುನ್ (22) ಮೃತರು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಮುಂಜಾನೆ ಸುಮಾರು 5 ಗಂಟೆಗೆ ಗ್ರಾಮದ ನಾಗರಾಜು ಮತ್ತು ಮಿಥುನ್ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನಲ್ಲಿದ್ದ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.