ADVERTISEMENT

‘ಸರ್ಕಾರಿ ಸೌಲಭ್ಯ ಬಡವರಿಗೆ ತಲುಪಲಿ’

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 3:12 IST
Last Updated 11 ಫೆಬ್ರುವರಿ 2022, 3:12 IST
ಜೀತ ಪದ್ಧತಿ ರದ್ದತಿ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಅಧಿಕಾರಿಗಳು
ಜೀತ ಪದ್ಧತಿ ರದ್ದತಿ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಅಧಿಕಾರಿಗಳು   

ಗೌರಿಬಿದನೂರು: ನಗರದ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಅಧ್ಯಕ್ಷತೆಯಲ್ಲಿ ಜೀತ ಪದ್ಧತಿ ರದ್ದತಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬಳಿಕ ಮಾತನಾಡಿದ ಅವರು, ಸರ್ಕಾರ ಗ್ರಾಮೀಣ ‌ಭಾಗದ ಬಡವರ ನೆಮ್ಮದಿಯ ಬದುಕಿಗಾಗಿ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ನರೇಗಾ ಕಾಮಗಾರಿಗಳಲ್ಲಿ ‌ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಅವರ ಬದುಕಿನ ಸೂಕ್ತ ಭದ್ರತೆ ಕಲ್ಪಿಸಬೇಕಾಗಿದೆ ಎಂದರು.

ಸರ್ಕಾರ ನೀಡುವ ಉಚಿತ ಶಿಕ್ಷಣವನ್ನು ಮಕ್ಕಳಿಗೆ ಕಲ್ಪಿಸುವ ಮೂಲಕ ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ಮಾಡಬೇಕಾಗಿದೆ. ಇದರಿಂದ ಪ್ರತಿ ಕುಟುಂಬವು ಜೀತ ಪದ್ಧತಿಯಿಂದ ಮುಕ್ತವಾಗಿ ‌ನೆಮ್ಮದಿಯಿಂದ ಬದುಕಲು ಸಹಕಾರಿಯಾಗಲಿದೆ. ಯಾವುದೇ ಕಾರಣಕ್ಕೂ ಜೀತ ಪದ್ಧತಿಗೆ ಕೂಲಿ ಕಾರ್ಮಿಕರನ್ನು ದೂಡದಂತೆ ಜಾಗೃತಿ ವಹಿಸಬೇಕಾಗಿದೆ ಎಂದು‌ ಹೇಳಿದರು.

ADVERTISEMENT

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ನಿರ್ದೇಶಕರಾದ ಗಿರಿಜಾ ಶಂಕರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಆರ್. ಹರೀಶ್, ವಕೀಲರಾದ ಎಚ್.ಎಲ್.ವಿ. ವೆಂಕಟೇಶ್, ಮುಖ್ಯಶಿಕ್ಷಕರಾದ ಟಿ.ಕೆ. ವೆಂಕಟಮೋಹನ್, ಜೀವಿಕ ಜಿಲ್ಲಾ ಸಂಚಾಲಕ ಹನುಮಂತು, ತಾಲ್ಲೂಕು ಒಕ್ಕೂಟದ ಅಧ್ಯಕ್ಷರು, ಸಂಚಾಲಕರು, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಪಿಡಿಒಗಳು, ಜೀವಿಕ ಸಂಚಾಲಕರು, ಪದಾಧಿಕಾರಿಗಳು ಮತ್ತು ಜೀತ ವಿಮುಕ್ತಿಗೊಂಡವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.