ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ
ಚಿಕ್ಕಬಳ್ಳಾಪುರ: ಕೈಗಾರಿಕೆಗಳು ರೈತರಿಗೆ ಅನ್ನ, ಶಿಕ್ಷಣ ಕೊಡುತ್ತದೆಯೇ? ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆಗೆ ಭೂಮಿ ಸ್ವಾಧೀನ ವಿರೋಧಿಸಿ ರೈತರು ಮೂರು ವರ್ಷ ಹೋರಾಟ ನಡೆಸಿದರು. ರೈತ ನಾಯಕರ ಸಮಕ್ಷಮದಲ್ಲಿ ಈ ಅಧಿಸೂಚನೆ ವಾಪಸ್ ಪಡೆಯುತ್ತೇವೆ ಎಂದು ಹೇಳಿ ಸರ್ಕಾರ ಎರಡು ತಿಂಗಳಾಯಿತು. ಆದರೂ ಅಧಿಸೂಚನೆ ವಾಪಸ್ ಪಡೆದಿಲ್ಲ. ನಾಚಿಕೆ ಆಗಬೇಕು ಈ ಸರ್ಕಾರಕ್ಕೆ. ಬಂಡವಾಳಶಾಹಿಗಳಿಗೆ, ರಿಯಲ್ ಎಸ್ಟೇಟ್‌ನವರಿಗೆ ಗುಲಾಮಗಿರಿ ಮಾಡುತ್ತೀರಿ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕಿಡಿಕಾರಿದರು.
ನಗರದಲ್ಲಿ ನಡೆದ ಜಲಾಗ್ರಹ ಸಮಾವೇಶದಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳ ಹೆಸರಿನಲ್ಲಿ ರೈತರ ಜಮೀನು ಕಬಳಿಸಲಾಗುತ್ತಿದೆ. ಸಚಿವರಿಗೆ, ದಲ್ಲಾಳಿಗಳಿಗೆ, ಅಧಿಕಾರಿಗಳಿ ಹಣ ಸೇರುತ್ತಿದೆ ಎಂದರು.
ಚೀನಾದಲ್ಲಿ ಒಬ್ಬ ಭ್ರಷ್ಟ ಕೃಷಿ ಸಚಿವನಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೇ ತಿಂಗಳಲ್ಲಿ ವಿಚಾರಣೆ ನಡೆದು ಜೀವಾವಧಿ ಶಿಕ್ಷೆ ಕೊಡುವರು. ಆದರೆ ನಮ್ಮಲ್ಲಿ ಮಾಜಿ ಮುಖ್ಯಮಂತ್ರಿ ಪ್ರಕರಣಗಳಲ್ಲಿ ವರ್ಷಗಳೇ ಕಳೆದರೂ ನ್ಯಾಯಾಲಯಕ್ಕೆ ಹೋಗದ ಪರಿಸ್ಥಿತಿ ಇದೆ. ಸಚಿವರು, ತಹಶೀಲ್ದಾರರು, ನೋಂದಣಾಧಿಕಾರಿ, ಉಪವಿಭಾಗಾಧಿಕಾರಿ ಸೇರಿದಂತೆ ನೌಕರಶಾಹಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.