ADVERTISEMENT

ಚಿಕ್ಕಬಳ್ಳಾಪುರ: ಫೆ.2ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 4:51 IST
Last Updated 26 ಜನವರಿ 2023, 4:51 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಮಾತನಾಡಿದರು
ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಮಾತನಾಡಿದರು   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ.2 ರಂದು ಮತ್ತು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ.3 ಮತ್ತು 4 ರಂದು ಹಮ್ಮಿಕೊಳ್ಳಲು ನಗರದಲ್ಲಿ ಬುಧವಾರ ನಡೆದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಹರೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಏಳನೇ ವೇತನ ಆಯೋಗ, 2023ನೇ ಸಾಲಿನ ಸರ್ಕಾರಿ ನೌಕರರ ಸದಸ್ಯತ್ವ ಶುಲ್ಕ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು. ಜನವರಿಯಲ್ಲಿ ಸದಸ್ಯತ್ವ ಶುಲ್ಕವಾಗಿ ₹200 ಕಟಾಯಿಸುವ ಬಗ್ಗೆ ಬಟವಾಡೆ ಅಧಿಕಾರಿಗಳಿಗೆ ಪತ್ರದ ಮೂಲಕ ಕೋರಲು ನಿರ್ಣಯ ಕೈಗೊಳ್ಳಲಾಯಿತು. ಎಲ್ಲ ನೌಕರರು ಸದಸ್ಯತ್ವ ಶುಲ್ಕವನ್ನು ಕಟಾವು ಗೊಳಿಸಲು ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಕೋರಲಾಯಿತು.

ಎನ್.ಪಿ.ಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವಂತೆ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.

ADVERTISEMENT

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.