ADVERTISEMENT

ಬಾಗೇಪಲ್ಲಿ: ಸಿಹಿ, ಗುಲಾಬಿ ಹೂವು ನೀಡಿ ಮಕ್ಕಳಿಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:19 IST
Last Updated 31 ಮೇ 2025, 14:19 IST
ದೇವರಗುಡಿಪಲ್ಲಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಕ್ಕಳಿಗೆ ಟೋಪಿ, ಹಾರಹಾಕಿ ಸ್ವಾಗತಿಸಿದರು
ದೇವರಗುಡಿಪಲ್ಲಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಕ್ಕಳಿಗೆ ಟೋಪಿ, ಹಾರಹಾಕಿ ಸ್ವಾಗತಿಸಿದರು   

ಬಾಗೇಪಲ್ಲಿ: ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಾಲಾ ಮೊದಲನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದರು.

ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಇಲಾಖಾ ಸವಲತ್ತನ್ನು ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ನೀಡಲಾಯಿತು.

ADVERTISEMENT

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಮನೀಷಾ ಎನ್.ಪತ್ರಿ, ಇಒ ಜಿ.ವಿ.ರಮೇಶ್, ಬಿಇಒ ಎನ್.ವೆಂಕಟೇಶಪ್ಪ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು.

ಲಕ್ಷ್ಮಿನಾರಾಯಣರೆಡ್ಡಿ ಅವರು 1.40 ಲಕ್ಷವೆಚ್ಚದಲ್ಲಿ ಶಾಲೆಗೆ ಸುಣ್ಣ, ದುರಸ್ತಿ, ಟೇಬಲ್, ಕುರ್ಚಿ ನೀಡಿದ್ದರು. ಧನ ಸಹಾಯ ಮಾಡಿದ ಕೊಠಡಿಯನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಾಗೂ ಲಕ್ಷ್ಮಿನಾರಾಯಣರೆಡ್ಡಿ ಲೋಕಾರ್ಪಣೆ ಮಾಡಿದರು.

ಸುಬ್ಬಾರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉತ್ತಮವಾಗಿ ಬರೆಯಲು, ಓದಲು ಕಲಿಸಬೇಕಾಗಿದೆ. ಕೆಲ ಮಕ್ಕಳಿಗೆ ಓದಲು, ಬರೆಯಲು ಬರುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹಿಂದುಳಿದ ಮಕ್ಕಳಿಗೆ ಓದಲು, ಬರೆಯುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.

ತಹಶೀಲ್ದಾರ್ ಮನೀಷಾ ಎನ್.ಪತ್ರಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಅನೇಕರು ಮಹನೀಯರು, ಉನ್ನತ ಸ್ಥಾನಮಾನದಲ್ಲಿ ಇದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಆಕರ್ಷಣೆ ಮಾಡಲು, ಬಣ್ಣದ ಹಾಳೆಗಳಲ್ಲಿ ಟೋಪಿ, ಹಾರ ಹಾಕಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದಾರೆ. ಶಾಲಾವರಣ, ಕೊಠಡಿ ಅಲಂಕಾರ ಮಾಡಲಾಗಿದೆ ಎಂದರು.

ಇಒ ಜಿ.ವಿ.ರಮೇಶ್, ತಾಲ್ಲೂಕು ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಸಿಡಿಪಿಒ ರಾಮಚಂದ್ರ, ಆರ್.ಹನುಮಂತರೆಡ್ಡಿ, ಶಂಕರಪ್ಪ, ಬಿ.ಎನ್.ನಟರಾಜ್, ಜಿ.ಆರ್.ರಮೇಶ್, ಎಲ್.ಬೈರೆಡ್ಡಿ, ಎನ್.ಶಿವಪ್ಪ, ಸರಸ್ವತಮ್ಮ, ಶಿವರಾಮರೆಡ್ಡಿ, ಉಮಾದೇವಿ, ವಿಶ್ವನಾಥ್, ಫಕೃದ್ದೀನ್, ಬಿ.ಎಂ.ಪ್ರಮೀಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.