ಗೌರಿಬಿದನೂರು: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಗೌರಿಬಿದನೂರು–ಚಿಕ್ಕಬಳ್ಳಾಪುರ ಮಾರ್ಗದ ಗಿಡಗಾನಹಳ್ಳಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗಿದೆ.
ಸೇತುವೆ ಕುಸಿತದಿಂದಾಗಿ ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ತೆರಳುವ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ದ್ವಿಚಕ್ರ ವಾಹನ ಸವಾರರು ಭಕ್ತರಹಳ್ಳಿ-ಗಿಡಗಾನಹಳ್ಳಿ ಮಾರ್ಗ ಬಳಸಿಕೊಂಡು ಸಂಚರಿಸುತ್ತಿದ್ದಾರೆ. ಬೃಹತ್ ವಾಹನಗಳು ತೊಂಡೇಬಾವಿ-ಮಂಚೇನಹಳ್ಳಿ ಮಾರ್ಗದ ಮೂಲಕ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಕಡೆಗೆ ಸಂಚರಿಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.