ADVERTISEMENT

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ; ಶಾಂತಿಯುತವಾಗಿ ಮತದಾನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 5:15 IST
Last Updated 28 ಅಕ್ಟೋಬರ್ 2020, 5:15 IST
ಚಿಕ್ಕಬಳ್ಳಾಪುರದ ಜೂನಿಯರ್ ಕಾಲೇಜ್ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾಯುತ್ತಿರುವ ಮತದಾರ.
ಚಿಕ್ಕಬಳ್ಳಾಪುರದ ಜೂನಿಯರ್ ಕಾಲೇಜ್ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾಯುತ್ತಿರುವ ಮತದಾರ.   

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಶಾಂತಿಯುತವಾಗಿ ಮತದಾನ ಆರಂಭ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಆರಂಭಗೊಂಡಿದೆ.

ಮತದಾನಕ್ಕಾಗಿ ಜಿಲ್ಲೆಯಲ್ಲಿ 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಚುನಾವಣೆಯಲ್ಲಿ 16,205 ಪದವೀಧರ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ADVERTISEMENT

ಜಿಲ್ಲಾಡಳಿತವು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.
ಕೋವಿಡ್ ಕಾರಣಕ್ಕೆ ಮತದಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಮತಗಟ್ಟೆಗೆ ಬರಬೇಕೆಂದು ಸೂಚಿಸಲಾಗಿದೆ. ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.