ಚಿಂತಾಮಣಿ: ತಾಲ್ಲೂಕಿನ ರಂಗೇನಹಳ್ಳಿಯಲ್ಲಿ ಸ್ಮಶಾನ ಒತ್ತುವರಿ ಖಂಡಿಸಿ ಗ್ರಾಮಸ್ಥರು ಶುಕ್ರವಾರ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ಸರ್ವೆ ನಂಬರ್ 8ರಲ್ಲಿ ಸ್ಮಶಾನವಿದೆ. ಈಚೆಗೆ ಕೆಲವರು ಸ್ಮಶಾನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶುಕ್ರವಾರ ಗ್ರಾಮದಲ್ಲಿ ಕೊಂಡಪ್ಪ (60) ಎಂಬುವರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ನಡೆಸಲು ಜಮೀನಿನಲ್ಲಿ ಗುಣಿ ತೋಡಲು ಹೋದಾಗ ಕೆಲವರು ಅಡ್ಡಿಪಡಿಸಿದರು. ಎರಡು ಗುಂಪಿನ ನಡುವೆ ವಾಗ್ವಾದ ನಡೆಯಿತು. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಭೂಮಾಪನ ಇಲಾಖೆ ಅಧಿಕಾರಿಗಳು ಪೊಲೀಸರ ಬಂದೋಬಸ್ತ್‌ನಲ್ಲಿ ಸ್ಮಶಾನ ಜಾಗ ಗುರುತಿಸಿ ಕೊಡಲು ಸರ್ವೆ ನಡೆಸಿದರು.
ಕಂದಾಯ ಇಲಾಖೆ ಅಧಿಕಾರಿ ರವೀಶ್, ನರಸಿಂಹಮೂರ್ತಿ ಸ್ಥಳಕ್ಕೆ ಬಂದು ಸ್ಮಶಾನ ಜಾಗ ಎಲ್ಲಿ ಬರುತ್ತೆದೆಯೋ ಅಲ್ಲಿ ಗುರುತಿಸಿ ಕೊಡುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.