
ಗುಡಿಬಂಡೆ: ಪಟ್ಟಣದಲ್ಲಿನ ಪೋಲಿಸ್ ವಸತಿ ಗೃಹದಲ್ಲಿ ಶುಕ್ರವಾರ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿದೆ. ಈ ವಿಷಯ ತಿಳಿದ ಸುತ್ತಮುತ್ತಲಿನ ಜನರಲ್ಲಿ ಕೆಲಹೊತ್ತು ಆತಂಕ ಮನೆ ಮಾಡಿತ್ತು.
ಪೋಲಿಸ್ ವಸತಿ ಗೃಹದಲ್ಲಿರುವ ಚಿರತೆ ಮರಿಯ ಚಿತ್ರವು ವಾಟ್ಸ್ಆ್ಯಪ್ ಸೇರಿದಂತೆ ಇನ್ನಿತರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತು. ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆ ಮರಿಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಕೊಂಡೊಯ್ದರು.
ಈ ಕುರಿತು ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು, ವಸತಿ ಗೃಹದಲ್ಲಿನ ಆವರಣದಲ್ಲಿ ನಿಲ್ಲಿಸಿದ್ದ ಹಳೆಯ ಕಾರಿನಲ್ಲಿ ಅಡಗಿಕೊಂಡಿದ್ದ ಚಿರತೆ ಮರಿಯನ್ನು ಬಲೆಬೀಸಿ ಹಿಡಿಯಲಾಗಿದೆ. ಚಿರತೆ ಮರಿಯು ಅಸ್ವಸ್ಥವಾಗಿರುವಂತೆ ಕಂಡುಬಂದಿತ್ತು. ಹೀಗಾಗಿ, ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಅದನ್ನು ಅರಣ್ಯಕ್ಕೆ ಬಿಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.