
ಗುಡಿಬಂಡೆ: ತಾಲ್ಲೂಕಿನ ಸೋಮೇನಹಳ್ಳಿ ಹೋಬಳಿ ಲಕ್ಷ್ಮಿಸಾಗರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿಸ್ಮೀಲ್ಲಾ ಮಕ್ತರ್ ಬಾಷ ಹಾಗೂ ಉಪಾಧ್ಯಕ್ಷರಾಗಿ ಆದಿನಾರಾಯಣಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರೇಮ್ ಕುಮಾರ್ ತಿಳಿಸಿದರು.
ಸಹಕಾರ ಸಂಘದ ನಿರ್ದೇಶಕರ ಆಯ್ಕೆಗಾಗಿ ಡಿಸೆಂಬರ್ 14ರಂದು ನಡೆದಿದ್ದ ಚುನಾವಣೆಯಲ್ಲಿ 11ನಿರ್ದೇಶಕರ ಆಯ್ಕೆಯಾಗಿತ್ತು. ಡಿಸೆಂಬರ್ 20ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಲಲಿತ ಗುರುಮೂರ್ತಿ, ಉಪಾಧ್ಯಕ್ಷ ಸ್ಥಾನಕ್ಕೆ ಅರುಣಾಮ್ಮ ವೆಂಕಟರೋಣಪ್ಪ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಸೋತಿದ್ದಾರೆ.
ಮುಖಂಡ ಸೋಮಶೇಖರ್ ಸೇರಿದಂತೆ ಹಾಲು ಉತ್ಪಾದಕ ಸಹಕಾರ ಸಂಘದ ನಿರ್ದೇಶಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.