ಸಾವು
(ಪ್ರಾತಿನಿಧಿಕ ಚಿತ್ರ)
ಗುಡಿಬಂಡೆ: ತಾಲ್ಲೂಕಿನ ಕರಿಗಾನತಮ್ಮನಹಳ್ಳಿ - ಇಡ್ರಹಳ್ಳಿ ಮಾರ್ಗದ ಬಳಿ ಇರುವ ಬಾವಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಕರಿಗಾನತಮ್ಮನಹಳ್ಳಿ ಗ್ರಾಮದ ವಾಟರ್‌ಮ್ಯಾನ್ ಕೆ.ಆರ್ ನಾರಾಯಣಸ್ವಾಮಿ ಅವರ ಪುತ್ರ ನಿಖಿಲ್ (25) ಮೃತರು.
ಸ್ಥಳಕ್ಕೆ ಗುಡಿಬಂಡೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಶವವನ್ನು ಹೊರತೆಗೆದು ಗುಡಿಬಂಡೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ನಿಖಿಲ್ ಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ನಿಖಿಲ್ ಪತ್ನಿ ಒಂದು ವಾರದ ಹಿಂದೆ ಊರಿಗೆ ಹೋಗಿದ್ದಾರೆ ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.