ADVERTISEMENT

ಗುಡಿಬಂಡೆ ತಾಲ್ಲೂಕಿನಲ್ಲಿ ಕಾಣಿಸಿಕೊಂಡ ಸೋಂಕು

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 8:36 IST
Last Updated 10 ಜುಲೈ 2020, 8:36 IST
ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮದಲ್ಲಿ ಸೋಂಕು ಕಾಣಿಸಿಕೊಂಡ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಯಿತು
ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮದಲ್ಲಿ ಸೋಂಕು ಕಾಣಿಸಿಕೊಂಡ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಯಿತು   

ಗುಡಿಬಂಡೆ: ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲದ ಗ್ರೀನ್ ಜೋನ್‌ನಲ್ಲಿದ್ದ ಗುಡಿಬಂಡೆ ತಾಲ್ಲೂಕಿನಲ್ಲಿ 62 ವರ್ಷದ ವ್ಯಕ್ತಿಗೆ ಕೊರೊನಾ ದೃಢವಾಗಿದೆ.

ತಾಲ್ಲೂಕಿನ ಸೋಮೇನಹಳ್ಳಿಯ ವ್ಯಕ್ತಿಯಾಗಿದ್ದಾರೆ. ಇವರು ಬೆಂಗಳೂರಿಗೆ ಹೋಗಿ ಬಂದ ಹಿನ್ನೆಲೆಯಲ್ಲಿ ಸೋಂಕು ತಗುಲಿರಬಹುದೆಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ಸೋಂಕಿತರಿಗೆ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲುಸ್ರಾವ ಪರೀಕ್ಷೆ ನಡೆಸಿದ್ದು, ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತರ ಮನೆಯ ಸುತ್ತಮುತ್ತ 100 ಮೀಟರ್ ಸೀಲ್‌ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದಿರುವ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಹಶೀಲ್ದಾರ್ ಹನುಮಂತರಾಯಪ್ಪ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.