
ಗುಡಿಬಂಡೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಸಿಂಗಾನಹಳ್ಳಿ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ಸುಮಾರು 6.30ಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟಾವಶತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ವಿಜಯ್ ಆನಂದ್, ಪತ್ನಿ ಶಿಲ್ಪ ಮತ್ತು ಮಗಳು ಲಿಷಿಕಾ ಅವರು ಸ್ವಗ್ರಾಮ ಅನಂತಪುರಕ್ಕೆ ಹೋಗಿದ್ದರು. ಸೋಮವಾರ ಬೆಳಗ್ಗೆ ಅನಂತಪುರದಿಂದ ಚಿಕ್ಕಬಳ್ಳಾಪುರದ ಕಡೆಗೆ ಹೊರಟಿದ್ದರು. ಈ ವೇಳೆ ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗುಡಿಬಂಡೆ ಸಬ್ ಇನ್‌ಸ್ಪೆಕ್ಟರ್ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.