ಗುಡಿಬಂಡೆ: ಮದುವೆಯಾಗಿ ಕೇವಲ ಆರು ತಿಂಗಳಾಗಿದ್ದ ಯುವತಿಯು ತನ್ನ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು. ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕೆ.ಎಸ್. ಜಯಶ್ರೀ (30) ಶೌಚಾಲಯದಲ್ಲಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಡೆತ್‌ನೋಟ್ ಸಹ ಬರೆದಿಟ್ಟಿದ್ದಾರೆ. ಜಯಶ್ರೀ ಅವರ ವಿವಾಹ ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಜೊತೆ ಆರು ತಿಂಗಳ ಹಿಂದೆ ವಿವಾಹವಾಗಿತ್ತು.
ಡೆತ್ ನೋಟ್‌ನಲ್ಲಿ ಆರೋಪಗಳೇನು: ಪತಿ ಚಂದ್ರಶೇಖರ್, ಗೊಲ್ಲಹಳ್ಳಿಯ ಯುವತಿ ಜೊತೆ ನಿರಂತರವಾಗಿ ಚಾಟಿಂಗ್ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದಾಗ ಪತಿಯಿಂದ ತೀವ್ರವಾದ ಕಿರುಕುಳ ಎದುರಿಸಬೇಕಾಯಿತು. ಕಿರುಕುಳ ಮತ್ತು ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದು ಡೆತ್‌ನೋಟ್‌ನಲ್ಲಿ ಜಯಶ್ರೀ ತಿಳಿಸಿದ್ದಾರೆ. ಪತಿ ಚಂದ್ರಶೇಖರ್ ಅವರೇ ನನ್ನ ಸಾವಿಗೆ ನೇರ ಕಾರಣ ಎಂದು ಬರೆದಿದ್ದಾರೆ.
ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿದ್ದು ಕಾನೂನು ಕ್ರಮಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.