ADVERTISEMENT

ಚಿಕ್ಕಬಳ್ಳಾಪುರ: ಭಕ್ತಿಯಿಂದ ಗುರು ಪೂರ್ಣಿಮೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 4:12 IST
Last Updated 25 ಜುಲೈ 2021, 4:12 IST
ಗುರು ಪೂರ್ಣಿಮೆ ಪ್ರಯುಕ್ತ ಹಾರೋಬಂಡೆ ಸಾಯಿಬಾಬಾ ಮಂದಿರದಲ್ಲಿ ಭಕ್ತರು ಸಾಯಿ ಬಾಬಾ ದರ್ಶನ ಪಡೆದರು
ಗುರು ಪೂರ್ಣಿಮೆ ಪ್ರಯುಕ್ತ ಹಾರೋಬಂಡೆ ಸಾಯಿಬಾಬಾ ಮಂದಿರದಲ್ಲಿ ಭಕ್ತರು ಸಾಯಿ ಬಾಬಾ ದರ್ಶನ ಪಡೆದರು   

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಶನಿವಾರ ಶ್ರದ್ಧಾಭಕ್ತಿಯಿಂದ ಗುರು ಪೂರ್ಣಿಮೆ ಆಚರಿಸಲಾಯಿತು.

ಶಿರಡಿ ಸಾಯಿ ಬಾಬಾ ಮಂದಿರಗಳಲ್ಲಿ ದಿನವೀಡಿ ವಿಶೇಷ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಭಕ್ತರು ಬೆಳಿಗ್ಗೆಯಿಂದಲೇ ಬಾಬಾ ದರ್ಶನ ಪಡೆಯಲು ದೇವಾಲಯಗಳಲ್ಲಿ ಇದ್ದರು. ರಾತ್ರಿಯವರೆಗೂ ಭಕ್ತರು ದೇಗುಲಗಳಲ್ಲಿ ಸಾಲುಗಟ್ಟಿದ್ದರು.

ನಗರದ ಎಂ.ಜಿ.ರಸ್ತೆಯ ಮುನ್ಸಿಪಲ್‌ ಬಡಾವಣೆಯಲ್ಲಿರುವ ಸಿದ್ಧಿವಿನಾಯಕ, ಶಿರಡಿ ಸಾಯಿಬಾಬಾ ಹಾಗೂ ಅನ್ನಪೂರ್ಣೇಶ್ವರಿ ದೇವಾಲಯ ಮತ್ತು ಎಚ್‌.ಎಸ್.ಗಾರ್ಡನ್‌ನಲ್ಲಿರುವ ಸುಬ್ರಹ್ಮಣ್ಯೇಶ್ವರ, ಶನೈಶ್ವರ, ಶಿರಡಿ ಸಾಯಿಬಾಬಾ ಮಂದಿರ, ಆಂಜನೇಯ ಸ್ವಾಮಿ ದೇಗುಲದಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು. ನಗರದ ಹೊರವಲಯದ ಹಾರೋಬಂಡೆಯ ಸಾಯಿಬಾಬಾ ಮಂದಿರದಲ್ಲಿಯೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು.

ADVERTISEMENT

ಎರಡು ದೇವಸ್ಥಾನಗಳಲ್ಲಿ ಸಾಯಿ ಬಾಬಾ ಅವರ ಮೂರ್ತಿಗಳಿಗೆ ವಿವಿಧ ಅಭಿಷೇಕ ನೆರವೇರಿಸಲಾಯಿತು. ಕಾಕಡಾರತಿ, ಕ್ಷೀರಾಭಿಷೇಕ, ಸತ್ಯನಾರಾಯಣಪೂಜೆ, ಹೋಮ, ಭಕ್ತರಿಗೆ ಪ್ರಸಾದ ವಿತರಣೆನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.