ADVERTISEMENT

ಶಿಡ್ಲಘಟ್ಟ: ಜ್ಞಾನಮಂದಿರದಲ್ಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 17:11 IST
Last Updated 5 ಜುಲೈ 2020, 17:11 IST
ಗುರುಪೂರ್ಣಿಮೆ ಅಂಗವಾಗಿ ಸಾಯಿನಾಥ ಜ್ಞಾನಮಂದಿರದಲ್ಲಿ ಸತ್ಯನಾರಾಯಣ ಪೂಜೆ ನಡೆಸಲಾಯಿತು
ಗುರುಪೂರ್ಣಿಮೆ ಅಂಗವಾಗಿ ಸಾಯಿನಾಥ ಜ್ಞಾನಮಂದಿರದಲ್ಲಿ ಸತ್ಯನಾರಾಯಣ ಪೂಜೆ ನಡೆಸಲಾಯಿತು   

ಶಿಡ್ಲಘಟ್ಟ: ಗುರುಪೂರ್ಣಿಮೆ ಅಂಗವಾಗಿ ಭಾನುವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಸರಳವಾಗಿ ಪೂಜೆ ನಡೆಸಲಾಯಿತು.

ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿ ಮಾಡಲಾಯಿತು. ಸುದರ್ಶನ ಹೋಮ ಮತ್ತು ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು.

ದೇವಾಲಯ ಹಾಗೂ ದೇವರ ಮೂರ್ತಿಗಳನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಕಡಿಮೆ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.