ಚಿಂತಾಮಣಿ: ಕೈವಾರದ ಯೋಗಿನಾರೇಯಣ ಮಠದಲ್ಲಿ ಜುಲೈ 8 ರಿಂದ 10ರವರೆಗೆ ನಡೆಯುವ ರಾಷ್ಟ್ರಮಟ್ಟದ ಸಂಗೀತೋತ್ಸವ ಮತ್ತು ಗುರುಪೂಜಾ ಮಹೋತ್ಸವದ ಆಹ್ವಾನಪತ್ರಿಕೆಯನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು.
ಎಂ.ಆರ್.ಜಯರಾಮ್ ಮತ್ತು ಟ್ರಸ್ಟ್ ಸದಸ್ಯರು ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.
ಯೋಗಿ ನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್ ಮಾತನಾಡಿ, ಜುಲೈ 8 ಮಂಗಳವಾರ ಬೆಳಗ್ಗೆ 6 ಗಂಟೆಗೆ ಗುರುಪೂಜೆ-ಸಂಗೀತೋತ್ಸವ ಆರಂಭವಾಗಿ 3 ದಿನ ನಿರಂತರವಾಗಿ ನಡೆಯಲಿದೆ. ನಾಡಿನ ವಿದ್ವಾಂಸರು, ನಾದಸ್ವರ ವಾದಕರು, ಸಂಗೀತಗಾರರು ಹಾಗೂ ಕಲೆಯ ನಾನಾ ಪ್ರಕಾರದ ಎಲ್ಲಾ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಕಾಣುವ ಅವಕಾಶ ಒದಗಿಬಂದಿದೆ ಎಂದರು.
ಮಠದ ಟ್ರಸ್ಟ್ ಖಜಾಂಚಿ ಆರ್.ಪಿ.ಎಂ.ಸತ್ಯನಾರಾಯಣ್, ಬಾಗೇಪಲ್ಲಿ ಕೆ.ನರಸಿಂಹಪ್ಪ, ಗಣೇಶ್ ಚಂದ್ರಪ್ಪ, ಕೆ.ಲಕ್ಷ್ಮಿನಾರಾಯಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.