ADVERTISEMENT

ಬಾಗೇಪಲ್ಲಿ: ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 13:39 IST
Last Updated 28 ಮಾರ್ಚ್ 2024, 13:39 IST
ಬಾಗೇಪಲ್ಲಿ ಪಟ್ಟಣದ ಪಿಎಂಶ್ರೀ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು
ಬಾಗೇಪಲ್ಲಿ ಪಟ್ಟಣದ ಪಿಎಂಶ್ರೀ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು   

ಬಾಗೇಪಲ್ಲಿ: ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಪಿಎಂಶ್ರೀ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಗುರುವಾರ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಾಲೆಯ ಮುಖ್ಯಶಿಕ್ಷಕ ಆರ್.ಹನುಮಂತರೆಡ್ಡಿ ಮಾತನಾಡಿ, ಶಾಲೆಯಲ್ಲಿ ಶೈಕ್ಷಣಿಕ ಹಾಗೂ ಮಕ್ಕಳ ಆರೋಗ್ಯ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಛತೆ ಹಾಗೂ ದೇಹದಲ್ಲಿನ ವಿವಿಧ ಆರೋಗ್ಯದ ಸಮಸ್ಯೆಗಳಿಗೆ ವೈದ್ಯರಿಂದ ತಪಾಸಣೆ, ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಪೌಷ್ಟಿಕಾಂಶ, ರಕ್ತದ ಕೊರತೆ ಇದೆ. ಆರೋಗ್ಯದ ತಪಾಸಣೆ ಮಾಡಲಾಗಿದೆ. ವಿದ್ಯಾರ್ಥಿನಿಯರಲ್ಲಿ ಸ್ವಚ್ಛತೆ ಕಡಿಮೆ ಇರುವುದರಿಂದ, ಸ್ವಚ್ಛತೆ ಕಾಪಾಡಬೇಕು. ಪ್ಲೋರೊಸಿಸ್ ರೋಗ ಹೆಚ್ಚಾಗಿದೆ. ಆರೋಗ್ಯದ ತಪಾಸಣೆ ಮಾಡಿ, ಸೂಕ್ತ ಔಷಧಿ ವಿತರಿಸಲಾಗಿದೆ ಎಂದರು.

ADVERTISEMENT

ಡಾ.ಐಶ್ವರ್ಯ, ಡಾ.ಸೌಭಾಗ್ಯ, ಡಾ.ಸ್ವರೂಪ್, ಡಾ.ರಾಜ್ ಚೌಹಾಣ್, ಕ್ಷೇತ್ರ ಸಮಯನ್ವಾಧಿಕಾರಿ ಆರ್.ವೆಂಕಟರಾಂ, ಶಿಕ್ಷಕ ವೈ.ಎಂ.ಮಂಜುನಾಥ್, ಪ್ರಭಾವತಿ, ಧರ್ಮಪುತ್ರಿ, ಬೇಬಿ ಮಮತಾಜ್, ಭಾರ್ಗವಿ, ಪದ್ಮಜ, ಕಲ್ಪನ, ರಾಧಿಕಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.