ADVERTISEMENT

ಹೃದ್ರೋಗ; ಮಧುಸೂದನ ಸಾಯಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 17:12 IST
Last Updated 4 ಜುಲೈ 2025, 17:12 IST
<div class="paragraphs"><p>ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆ</p></div>

ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆ

   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದ ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆಯು ಹೃದ್ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದು, ರೋಗಿಗಳು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.

ಸಂಸ್ಥೆಯ ಹೃದ್ರೋಗ ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಹೃದ್ರೋಗ ತಜ್ಞರು ಕೆಲಸ ಮಾಡುತ್ತಿದ್ದಾರೆ. ಅತ್ಯಾಧುನಿಕ ಹೃದಯ ಶಸ್ತ್ರಚಿಕಿತ್ಸೆಯನ್ನು ಎಲ್ಲ ವರ್ಗದ ಜನರಿಗೆ ಯಾವುದೇ ಶುಲ್ಕವಿಲ್ಲದೆಯೇ ಸಂಪೂರ್ಣ ಉಚಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ, ಹೊರ ರಾಜ್ಯದ ಮಕ್ಕಳು, ನಾಗರಿಕರು ಸೌಲಭ್ಯ ಬಳಕೆ ಮಾಡಿಕೊಂಡಿದ್ದಾರೆ.

ADVERTISEMENT

ಆಂಜಿಯೋಗ್ರಫಿ, ಆಂಜಿಯೋಪ್ಲಾಸ್ಟಿ, ಬೈಪಾಸ್ ಶಸ್ತ್ರಚಿಕಿತ್ಸೆ, ಪೇಸ್ ಮೇಕರ್ ಅಳವಡಿಸುವಿಕೆ, ಕವಾಟ ದುರಸ್ತಿ ಮತ್ತು ಬದಲಿ ಅವಯವಗಳ ಶಸ್ತ್ರಚಿಕಿತ್ಸೆ, ಜನ್ಮಜಾತ ಹೃದ್ರೋಗ ಶಸ್ತ್ರಚಿಕಿತ್ಸೆ ಸೇರಿದಂತೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ.

ಸಂಪರ್ಕ: 08156–275811 (ಬೆಳಿಗ್ಗೆ 10ರಿಂದ ಸಂಜೆ 4). ವೆಬ್‌ಸೈಟ್: www.smsimsr.org 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.