ಚಿಕ್ಕಬಳ್ಳಾಪುರ: ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಆರಂಭವಾದ ಮಳೆ ಸಂಜೆಯವರೆಗೂ ಧಾರಾಕಾರವಾಗಿ ಸುರಿಯಿತು.
ಮಳೆಯಿಂದ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಯಿತು. ಕಳೆದ ಎರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಮಂಗಳವಾರ ಮಧ್ಯಾಹ್ನವೇ ಬೋರ್ಗರೆಯಿತು.
ಗ್ರಾಮೀಣ ಪ್ರದೇಶಗಳ ಹೊಲಗಳಲ್ಲಿ, ತೋಟಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಲುಗಡೆಯಾಗಿತ್ತು. ಶಾಲೆಗಳಿಂದ ಮನೆಗಳಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳು ಹೈರಾಣಾಗುವಂತೆ ಮಾಡಿತ್ತು. ನಿರಂತರವಾಗಿ ಸುರಿದ ಮಳೆಯಿಂದ ರಸ್ತೆ, ಚರಂಡಿಗಳು ಮಳೆ ನೀರಿನಿಂದ ಆವೃತವಾದವು.
ಅನಿವಾರ್ಯವಾಗಿ ಹೊರ ಹೋಗಬೇಕಾದ ಜನರು ಕೊಡೆಗಳಿಗೆ ಮೊರೆ ಹೋದರು. ಅಲ್ಲದೆ ವಿವಿಧ ಕೆಲಸಗಳಿಗಾಗಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದಿದ್ದ ಜನರು ಮಳೆಯಿಂದ ಆಶ್ರಯ ಪಡೆಯಲು
ಹೆಣಗಿದರು.
ನಿರಂತರ ಮಳೆಯಿಂದ ಬೀದಿ ಬದಿ ವ್ಯಾಪಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ನಗರದ ಬಹುತೇಕ ವಾರ್ಡ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.