ADVERTISEMENT

ಸಂಕಷ್ಟದಲ್ಲಿರುವವರಿಗೆ ಸಹಾಯ: ಡಾ. ಸಿ.ಕೆ.ಶಿವಣ್ಣ

​ಪ್ರಜಾವಾಣಿ ವಾರ್ತೆ
Published 31 ಮೇ 2021, 2:42 IST
Last Updated 31 ಮೇ 2021, 2:42 IST
ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸಿ.ಕೆ.ಶಿವಣ್ಣ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ ಮಾಸ್ಕ್‌ ವಿತರಿಸಿದರು
ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸಿ.ಕೆ.ಶಿವಣ್ಣ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ ಮಾಸ್ಕ್‌ ವಿತರಿಸಿದರು   

ಚಿಂತಾಮಣಿ: ಮನೆಯಲ್ಲಿಯೂ ಮಾಸ್ಕ್ ಧರಿಸಬೇಕು. ಮನೆಯ ಬಳಿ ಮರಗಿಡಗಳಿದ್ದರೆ ಅದರ ಗಾಳಿ ಸೇವನೆ ಮಾಡುವುದು ಉತ್ತಮ ಎಂದು ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸಿ.ಕೆ.ಶಿವಣ್ಣ ಹೇಳಿದರು.

ನರೇಂದ್ರ ಮೋದಿಯವರ 7 ವರ್ಷದ ಸೇವಾವಧಿ ಪೂರ್ಣಗೊಂಡ ಪ್ರಯುಕ್ತ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಪಂಡಿತ್ ದೀನ್‌ದಯಾಳ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯಿಂದ ಬಟ್ಲಹಳ್ಳಿ ಗ್ರಾಮದಲ್ಲಿ ಆಹಾರ, ಮಾಸ್ಕ್, ಸ್ಯಾನಿಟೈಸರ್ ವಿತರಿಸಿ
ಮಾತನಾಡಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ ಮಾತನಾಡಿ, ದೇಶ ಕೊರೊನಾದಿಂದ ನಲುಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇವೆಯೆ ಸಂಘಟನೆ ಎಂಬ ಕರೆ ಕೊಟ್ಟರು. ನಾವು ಸೇವೆ ಮಾಡುತ್ತಿದ್ದೇವೆ. ಜನರನ್ನು ಜಾಗೃತಿ ಮೂಡಿಸುವ ಜೊತೆಗೆ ಸಂಕಷ್ಟದಲ್ಲಿರುವವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ ಎಂದರು.

ADVERTISEMENT

ಬಟ್ಲಹಳ್ಳಿ ಗ್ರಾಮದಲ್ಲಿ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಗುಡಿಸಲಲ್ಲಿ ನೆಲಸಿರುವವರಿಗೆ ಊಟದ ಜೊತೆಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು.

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಮುಖಂಡ ಪಾರ್ಥಣ್ಣ, ವೆಂಕಟೇಶ, ಎ.ಬಿ.ಮನೋಹರ್, ರಘು, ಬಿ.ಸಿ.ಮನೋಹರ್, ರಘುಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.