
ಶಿಡ್ಲಘಟ್ಟ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ದೇಶದಾದ್ಯಂತ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಭಾಗವಾಗಿ ಫೆಬ್ರುವರಿ 1ರ ಭಾನುವಾರ ನಗರದಲ್ಲಿ ಹಿಂದೂ ಸಮಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಿಂದೂ ಸಮಾಜೋತ್ಸವವು ಯಾವುದೇ ಧರ್ಮದ ವಿರುದ್ಧದ ಶಕ್ತಿ ಪ್ರದರ್ಶನವಲ್ಲ. ಬದಲಿಗೆ, ಹಿಂದೂಗಳ ಒಗ್ಗೂಡಿಸುವ ಯತ್ನವಾಗಿದೆ. ಮದ್ಯಾಹ್ನ 2.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಭಾಷಣಕಾರರಾಗಿ ಕೋಲಾರ ಜಿಲ್ಲಾ ಸಂಘಚಾಲಕ್ ಗೋವಿಂದರಾಜ್ ಬಾಗವಹಿಸಲಿದ್ದಾರೆ. ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಹಿಂದೂಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ಮಾತನಾಡಿ, ಫೆ. 1ರ ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಬಸ್ ನಿಲ್ದಾಣದಿಂದ ಸಾಗುವ ಬೃಹತ್ ಶೋಭಾಯಾತ್ರೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಪಿ.ವಿ.ಶ್ರೀನಿವಾಸ್ ಮಾತನಾಡಿ, ಕಾರ್ಯಕ್ರಮದಲ್ಲಿ ಸುಮಾರು 4-5 ಸಾವಿರ ಜನರು ಸೇರುವ ನಿರೀಕ್ಷೆಯಿದೆ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ನರೇಶ್, ಹಿಂದೂ ಸಮಾಜೋತ್ಸವ ಸಮಿತಿ ಪದಾಧಿಕಾರಿ ಮುಖೇಶ್, ರಘು, ರಾಮಕೃಷ್ಣ, ಅಶ್ವತ್ಥ್, ಮಣಿ, ಚೆಲುವರಾಜ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.