ADVERTISEMENT

ಗೃಹರಕ್ಷಕದಳ ಸಿಬ್ಬಂದಿ ಬೈಕ್ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 2:38 IST
Last Updated 26 ಜನವರಿ 2021, 2:38 IST
ಶಿಡ್ಲಘಟ್ಟದ ಗೃಹರಕ್ಷಕದಳ ಸಿಬ್ಬಂದಿ ಬೈಕ್ ರ‍್ಯಾಲಿ ನಡೆದಸಿ ಜನರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು
ಶಿಡ್ಲಘಟ್ಟದ ಗೃಹರಕ್ಷಕದಳ ಸಿಬ್ಬಂದಿ ಬೈಕ್ ರ‍್ಯಾಲಿ ನಡೆದಸಿ ಜನರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು   

ಶಿಡ್ಲಘಟ್ಟ: ‘ಗೃಹರಕ್ಷಕರು ಅಗ್ನಿಶಮನ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯ ಅಲ್ಲದೇ ಇತರ ಯಾವುದೇ ಇಲಾಖೆಗೆ ನಿಯೋಜಿಸಿದರೂ ಆ ಇಲಾಖೆಗೆ ಸಂಬಂಧಪಟ್ಟ ಕೆಲಸವನ್ನು ಮಾಡುವಲ್ಲಿ ಸಮರ್ಥರಾಗಿದ್ದೇವೆ’ ಎಂದು ಗೃಹ ರಕ್ಷಕದಳದ ತಾಲ್ಲೂಕು ಘಟಕ ಅಧಿಕಾರಿ ನಾರಾಯಣಸ್ವಾಮಿ ಹೇಳಿದರು.

ನಗರದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಅಖಿಲ ಭಾರತ ಗೃಹ ರಕ್ಷಕದಳ ದಿನಾಚರಣೆ ಅಂಗವಾಗಿ ಕರ್ನಾಟಕ ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆ ಶಿಡ್ಲಘಟ್ಟ ಘಟಕದಿಂದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಮಾಜದಲ್ಲಿ ಗೃಹರಕ್ಷಕ ದಳ ಸಿಬ್ಬಂದಿಯ ಸೇವೆ ಶ್ಲಾಘನೀಯವಾದದ್ದು. ಗೃಹ ರಕ್ಷಕ ದಳವನ್ನು 1962ರಲ್ಲಿ ಸ್ಥಾಪನೆ ಮಾಡಲಾಯಿತು. ಅಂದಿನಿಂದ ಇಂದಿನವರೆಗೆ ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಿಂದೆ ಸ್ವಯಂ ಸೇವಕರಾಗಿ ದುಡಿಯಲು ಗೃಹರಕ್ಷಕ ದಳಕ್ಕೆ ಸೇರುವ ಜನರ ಸಂಖ್ಯೆ ವಿರಳವಾಗಿತ್ತು. ಆದರೆ ಕಾಲಕ್ರಮೇಣ ಭಾರತೀಯ ಸೈನ್ಯ, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇದ್ದು, ಅವಕಾಶದಿಂದ ವಂಚಿತರಾದವರು, ಗೃಹರಕ್ಷಕ ಸೇರಿದರೆ ಸೈನಿಕ, ಪೊಲೀಸರಂತೆ ಕೆಲಸ ಮಾಡಬಹುದು ಎಂಬ ದೃಷ್ಟಿಯಿಂದ ಇತ್ತೀಚಿನ ದಿನಗಳಲ್ಲಿ ಗೃಹರಕ್ಷಕ ದಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ’ ಎಂದರು.

ADVERTISEMENT

‘ಪೊಲೀಸ್ ಇಲಾಖೆಕೂಡ ಕಂಪ್ಯೂಟರ್, ಸಿಸಿಟಿವಿ ಆಪರೇಟರ್, ಸಂಚಾರ ನಿಯಂತ್ರಕ, ವಾಹನ ಚಾಲಕ ಮುಂತಾದ ಕ್ಷೇತ್ರಗಳಲ್ಲಿ ಪೊಲೀಸ್ ಸಮವಸ್ತ್ರ ಸಮೇತ ಸೇವೆ ಮಾಡಲು ಗೃಹರಕ್ಷಕರಿಗೆ ಅವಕಾಶ ನೀಡುತ್ತಿದೆ. ಪ್ರಕೃತಿ ವಿಕೋಪದ ಸಂದರ್ಭ ಹಾಗೂ ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕ ದಳದ ಸ್ವಯಂ ಸೇವಕರ ತ್ಯಾಗ ಮೆಚ್ಚುವಂಥದ್ದು’ ಎಂದರು.

ಗೃಹರಕ್ಷಕದಳ ಸಿಬ್ಬಂದಿ ಬೈಕ್ ರ‍್ಯಾಲಿಯ ಮೂಲಕ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ವಾಹನ ಸವಾರರಿಗೆ ಜಾಗೃತಿ ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.