ADVERTISEMENT

ವೈದ್ಯರಿಗೆ ಗೌರವಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 5:34 IST
Last Updated 16 ಜೂನ್ 2021, 5:34 IST
ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ ವೈದ್ಯರು ಮತ್ತು ಸಿಬ್ಬಂದಿಗೆ ಗೌರವಧನ ವಿತರಿಸಿದರು
ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ ವೈದ್ಯರು ಮತ್ತು ಸಿಬ್ಬಂದಿಗೆ ಗೌರವಧನ ವಿತರಿಸಿದರು   

ಚಿಂತಾಮಣಿ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿಯ ವೇತನಕ್ಕಾಗಿ ಶಾಸಕ ಎಂ.ಕೃಷ್ಣಾರೆಡ್ಡಿ ₹7.50 ಲಕ್ಷ ನೀಡಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 35 ಸಿಬ್ಬಂದಿಗೆ ಗೌರವಧನ ವಿತರಿಸಿ ಮಾತನಾಡಿ, ಎಲ್ಲ ಸಂಘಸಂಸ್ಥೆಗಳು, ರಾಜಕಾರಣಿಗಳು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರಿಗೆ ಅಷ್ಟಾಗಿ ತೊಂದರೆಯಾಗಲಿಲ್ಲ
ಎಂದರು.

ರಾಜ್ಯದ ಹಲವಾರು ಕಡೆಗಳ ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲ. ಆಮ್ಲಜನಕ, ವೆಂಟಿಲೇಟರ್‌ ಇಲ್ಲ ಎಂಬ ದೂರು ಬಂದಿವೆ. ಆದರೆ ನಮ್ಮ ತಾಲ್ಲೂಕಿನಲ್ಲಿ ಅಂತಹ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ಕೊರೊನಾ ಸಂದರ್ಭದಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಾಗಬಾರದು ಎಂದು 3 ತಿಂಗಳವರೆಗೆ ಕೆಲಸ ಮಾಡಲು ಸ್ವಯಂಪ್ರರಿತವಾಗಿ ವೈದ್ಯರು ಮತ್ತು ಸಿಬ್ಬಂದಿ ಮುಂದೆ ಬಂದಿದ್ದರು. ಅವರಿಗೆ ಗೌರವಧನನ್ನು ನೀಡುತ್ತಿರುವುದಾಗಿ ತಿಳಿಸಿದರು.

ADVERTISEMENT

ತಹಶೀಲ್ದಾರ್ ಹನುಮಂತರಾಯಪ್ಪ, ಡಿವೈಎಸ್ಪಿ ವಿ.ಲಕ್ಷ್ಮಯ್ಯ, ಸತ್ಯನಾರಾಯಣ ಮಹೇಶ್, ತಾಲ್ಲೂಕು ಆರೋಗ್ಯಧಿಕಾರಿ ಡಾ.ಸ್ವಾತಿ, ಆಡಳಿತ ವೈದ್ಯಾಧಿಕಾರಿ ಡಾ.ಸಂಕೋಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.