ADVERTISEMENT

ಅಕ್ರಮ ಮದ್ಯ ಮಾರಾಟ: ಆರೋಪಿಗೆ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 14:28 IST
Last Updated 23 ಆಗಸ್ಟ್ 2024, 14:28 IST

ಗೌರಿಬಿದನೂರು: ತಾಲ್ಲೂಕಿನ ಚೀಕಟಗೆರೆ ಗ್ರಾಮದಲ್ಲಿ ಅಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಶ್ರೀನಿವಾಸ್ ಅವರಿಗೆ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ ಕಠಿಣ ಶಿಕ್ಷೆ ಮತ್ತು ₹30ಸಾವಿರ ದಂಡವನ್ನು ಶುಕ್ರವಾರ ವಿಧಿಸಿದೆ.

ಆರೋಪಿ 2018ರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ್ದ ಅಬಕಾರಿ ಪೊಲೀಸರು 12,960 ಲೀಟರ್ ಮದ್ಯ ವಶಪಡಿಸಿಕೊಂಡಿದ್ದರು. ಸುದೀರ್ಘ ವಿಚಾರಣೆ ನಂತರ ಆರೋಪಿಗೆ ನ್ಯಾಯಾಲಯ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT