
ಶಿಡ್ಲಘಟ್ಟ: ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ತಾಲ್ಲೂಕಿನ ಅನೇಕ ಕಡೆ ಮರಳು ಮತ್ತು ಮಣ್ಣನ್ನು ಸಾಗಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿದೆ. ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಹಶೀಲ್ದಾರ್ ಎನ್.ಗಗನ ಸಿಂಧು ಎಚ್ಚರಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಕಸಬಾ, ಜಂಗಮಕೋಟೆ, ಬಶೆಟ್ಟಹಳ್ಳಿ ಹಾಗೂ ಸಾದಲಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದೆ.
ಇನ್ನು ಮುಂದೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಮಣ್ಣನ್ನು ಸಾಗಿಸುವುದು ಕಂಡು ಬಂದಲ್ಲಿ ಕರ್ನಾಟಕ ಭೂ ಕಂದಾಯ ಅನಿಯಮ 1964 ಕಲಂ 70ರ ಪ್ರಕಾರ ಮಣ್ಣು ಸಾಗಿಸುವ ವಾಹನ, ಯಂತ್ರ ಮತ್ತು ಅವುಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.