ADVERTISEMENT

ಚಿಕ್ಕಬಳ್ಳಾಪುರ: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 4:03 IST
Last Updated 29 ಜುಲೈ 2022, 4:03 IST

ಚಿಕ್ಕಬಳ್ಳಾಪುರ: ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 10 ಟನ್ ಪಡಿತರ ಅಕ್ಕಿಯನ್ನು ಬಾಗೇಪಲ್ಲಿ ಟೋಲ್ ಬಳಿ ಗುರುವಾರ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್ ಕಡೆಯಿಂದಬೆಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಆಹಾರ ಇಲಾಖೆ ಅಧಿಕಾರಿಗಳಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿಬಾಗೇಪಲ್ಲಿ ಟೋಲ್ ಬಳಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ತಪಾಸಣೆಗೆ ಮುಂದಾಗಿದ್ದರು.

ಈ ವೇಳೆ ವಾಹನವೊಂದರಲ್ಲಿ ಅಕ್ಕಿ ಮೂಟೆಗಳು ಇದ್ದವು. ಸುಮಾರು 200 ಮೂಟೆಗಳಲ್ಲಿ 10 ಟನ್ ಅಕ್ಕಿ ಇದ್ದು ಇದರ ಮೌಲ್ಯ ₹ 2.50 ಲಕ್ಷ ಎಂದು ಅಂದಾಜಿಸಲಾಗಿದೆ.

ADVERTISEMENT

ವಾಹನ ಚಾಲಕತೆಲಂಗಾಣದ ಬಿ.ರಾಮುಲು ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಸಾರ್ವಜನಿಕ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಗೆ ನೀಡದೆ ಮೋಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಹಾರ ಇಲಾಖೆ ಶಿರಸ್ತೇದಾರ್ ಎನ್.ರಾಮು, ಆಹಾರ ನಿರೀಕ್ಷಕರಾದ ಕೆ.ಎನ್.ಪ್ರಭಾಕರ್, ಇನ್‌ಸ್ಪೆಕ್ಟರ್ ಡಿ.ಆರ್.ನಾಗರಾಜ್, ಸಿಬ್ಬಂದಿ ಚಲಪತಿ, ವಿಜಿಯಪ್ಪಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.