ADVERTISEMENT

ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವೆ

ಜಿಲ್ಲಾಡಳಿತ ಭವನದಲ್ಲಿ ಸಂಸದರ ನೂತನ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 14:09 IST
Last Updated 11 ಸೆಪ್ಟೆಂಬರ್ 2019, 14:09 IST
ಸಂಸದರ ಕಚೇರಿಯಲ್ಲಿ ಬಿ.ಎನ್.ಬಚ್ಚೇಗೌಡರು ಪೂಜೆ ನೆರವೇರಿಸಿದರು.
ಸಂಸದರ ಕಚೇರಿಯಲ್ಲಿ ಬಿ.ಎನ್.ಬಚ್ಚೇಗೌಡರು ಪೂಜೆ ನೆರವೇರಿಸಿದರು.   

ಚಿಕ್ಕಬಳ್ಳಾಪುರ: ‘ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಭವನದಲ್ಲಿ ಪ್ರತ್ಯೇಕ ಕಚೇರಿ ತೆರೆಯಲಾಗಿದೆ’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿ ತೆರೆಯಲಾದ ಸಂಸದರ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಹಂತಗಳಲ್ಲಿ ಜನರ ದೂರು ಪೆಟ್ಟಿಗೆಗಳನ್ನು ಅಳವಡಿಸಿ, ಖುದ್ದಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತೇನೆ. ಜಿಲ್ಲೆಯಲ್ಲಿ ತಲೆದೋರಿರುವ ನೀರಿನ ಸಮಸ್ಯೆ, ಅಪೌಷ್ಠಿಕತೆ ಮುಂತಾದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವೆ. ಜಿಲ್ಲೆಯನ್ನು ಮಾದರಿಯನ್ನಾಗಿ ರೂಪಿಸಲು ಶ್ರಮಿಸುತ್ತೇನೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರುನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಹಾಜರಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್‌ ಸೇರಿದಂತೆ ಅನೇಕ ಮುಖಂಡರು ಬಚ್ಚೇಗೌಡರಿಗೆ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.