ADVERTISEMENT

‘ರಾಷ್ಟ್ರದಲ್ಲಿ ಪರಿಶಿಷ್ಟರ ಮೀಸಲಾತಿ ಹೆಚ್ಚಿಸಿದ ಹೆಗ್ಗಳಿಕೆ ಬಿಜೆಪಿ ಸರ್ಕಾರದ್ದು’

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 6:14 IST
Last Updated 19 ಮಾರ್ಚ್ 2023, 6:14 IST
ಶಿಡ್ಲಘಟ್ಟದಲ್ಲಿನ ಬಿಜೆಪಿಯ ಸೇವಾಸೌಧ ಕಚೇರಿಗೆ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಭೇಟಿ ನೀಡಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರೊಂದಿಗೆ ಪಕ್ಷದ ಸಂಘಟನೆ ಕುರಿತಂತೆ ಚರ್ಚಿಸಿದರು
ಶಿಡ್ಲಘಟ್ಟದಲ್ಲಿನ ಬಿಜೆಪಿಯ ಸೇವಾಸೌಧ ಕಚೇರಿಗೆ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಭೇಟಿ ನೀಡಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರೊಂದಿಗೆ ಪಕ್ಷದ ಸಂಘಟನೆ ಕುರಿತಂತೆ ಚರ್ಚಿಸಿದರು   

ಶಿಡ್ಲಘಟ್ಟ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಸಹಿತ ಸರ್ವಜನರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಾತಿ ಸೌಲಭ್ಯವನ್ನು ಹೆಚ್ಚಿಸಿದ ಸರ್ಕಾರ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಕರ್ನಾಟಕ ಬಿಜೆಪಿ ಸರ್ಕಾರ ಮಾತ್ರ . ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳು, ದೇಶದ ಅಭಿವೃದ್ದಿಯ ವೇಗ, ಕಾರ್ಯಕ್ರಮಗಳನ್ನು ನೋಡಿ ಬಿಜೆಪಿಯನ್ನು ಬೆಂಬಲಿಸಿ, ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಮನವಿ ಮಾಡಿದರು.

ADVERTISEMENT

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸೀಕಲ್ ರಾಮಚಂದ್ರಗೌಡ ಅವರ ಸೇರ್ಪಡೆಯಿಂದ ಪಕ್ಷ ಇಲ್ಲಿ ಇನ್ನಷ್ಟು ಬಲಿಷ್ಠವಾಗುತ್ತಿದೆ. ಇಲ್ಲಿ ರಾಜಕೀಯ ಬದಲಾವಣೆಯ ಎಲ್ಲ ಲಕ್ಷಣಗಳು ಕಾಣುತ್ತಿವೆ ಎಂದ ಅವರು, ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿದರೆ ಕಮಲ ಅರಳುವುದು ನಿಶ್ಚಿತ ಎಂದರು.

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಚಿಂತಾಮಣಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.