ADVERTISEMENT

ಸೋಂಕು ಗುಣಮುಖ: ಮನೆಗೆ ಮಹಿಳೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 15:07 IST
Last Updated 6 ಏಪ್ರಿಲ್ 2020, 15:07 IST

ಚಿಕ್ಕಬಳ್ಳಾಪುರ: ಮೆಕ್ಕಾ ಯಾತ್ರೆಗೆ ತೆರಳಿ ಕೋವಿಡ್‌–19 ಕಾಯಿಲೆಗೆ ತುತ್ತಾಗಿ, ಬೆಂಗಳೂರಿನ ರಾಜೀವ್‌ ಗಾಂಧಿ ಎದೆ ರೋಗಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೌರಿಬಿದನೂರಿನ ಚೌಡೇಶ್ವರಿ ಬಡಾವಣೆಯ 65 ವರ್ಷದ ಮಹಿಳೆಯು ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್.ಲತಾ, ‘ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಪ್ರಕರಣದಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಗುಣಮುಖರಾಗಿ ಸೋಮವಾರ ಮನೆಗೆ ವಾಪಾಸಾಗಿದ್ದಾರೆ. ಉಳಿದ ಎಂಟು ಸೋಂಕಿತ ವ್ಯಕ್ತಿಗಳು ಗುಣಮುಖರಾಗುತ್ತಿರುವುದು ಸಂತಸ ತಂದಿದೆ. ಹಾಗೂ ವಿದೇಶ ಪ್ರಯಾಣ ಮಾಡಿದ್ದ ಜಿಲ್ಲೆಯ ಜನರು ಕ್ವಾರೆಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ.ಆದರೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಕೋವಿಡ್‌ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಯಾರಲ್ಲಿಯೂ ಹೊಸದಾಗಿ ಸೋಂಕು ಪತ್ತೆಯಾಗಿಲ್ಲ. ಜಿಲ್ಲೆಯ ಜನತೆ ಕೊರೋನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಮನೆಯಲ್ಲಿರುವ ಮೂಲಕ ಕೊರೊನಾ ತಡೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.