ADVERTISEMENT

ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 4:58 IST
Last Updated 29 ಡಿಸೆಂಬರ್ 2022, 4:58 IST
ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ ಹಾಗೂ ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಮಂಜು ನಾಯಕ್ ಅವರು ಸಂಭವನೀಯ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು
ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ ಹಾಗೂ ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಮಂಜು ನಾಯಕ್ ಅವರು ಸಂಭವನೀಯ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು   

ಶಿಡ್ಲಘಟ್ಟ: ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ತಾಲ್ಲೂಕುಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ ಹಾಗೂ ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಮಂಜು ನಾಯಕ್ ಅವರು ಕೊರೊನಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಪರಿಶೀಲಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ‘ಚೀನಾದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿಭಾರತ ಸರ್ಕಾರ ಬಿಗಿ ಕ್ರಮಕೈಗೊಳ್ಳುತ್ತಿದೆ. ಈ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಮುಂದಾಲೋಚನೆ
ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದುತಿಳಿಸಿದರು.

ಆಮ್ಲಜನಕಸಿಲಿಂಡರ್‌, ವೆಂಟಿಲೇಟರ್‌ ಮತ್ತು ಮಾನವ ಸಂಪನ್ಮೂಲಒಳಗೊಂಡಂತೆ ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. 50 ಆಮ್ಲಜನಕವ್ಯವಸ್ಥೆಯಿರುವ ಹಾಸಿಗೆಗಳು, ಹತ್ತು ಹಾಸಿಗೆಗಳುಳ್ಳ ಐಸಿಯು,ಎಂಟು ಪ್ರತ್ಯೇಕ
ವಾಸದ ಹಾಸಿಗೆಗಳು, ಐದು ವೆಂಟಿಲೇಟರ್, ಮಕ್ಕಳಿಗಾಗಿ ಪ್ರತ್ಯೇಕ ಹಾಸಿಗೆಗಳು, ರಕ್ತ ತಪಾಸಣೆಗಾಗಿ ಲ್ಯಾಬ್ ವ್ಯವಸ್ಥೆ, 94 ಆಮ್ಲಜನಕ ಸಿಲಿಂಡರ್‌ಗಳಲ್ಲಿ 80 ಭರ್ತಿಯಾಗಿವೆ. ವೈದ್ಯರು ಹಾಗೂ ದಾದಿಯರಿಗೆ ತರಬೇತಿ ನೀಡಲಾಗಿದೆ. ಆಸ್ಪತ್ರೆ ಆವರಣದಲ್ಲಿನ ಆಮ್ಲಜನಕ ಉತ್ಪಾದಕ ಘಟಕ ಸುಸ್ಥಿತಿಯಲ್ಲಿದೆ ಎಂದರು.

ADVERTISEMENT

ಸೋಂಕಿತರಿಗಾಗಿ ಪ್ರತ್ಯೇಕ ವಾರ್ಡ್ ಮತ್ತು ಹಾಸಿಗೆ ಮೀಸಲಿಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.