ADVERTISEMENT

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 1:51 IST
Last Updated 13 ನವೆಂಬರ್ 2020, 1:51 IST

ಚಿಕ್ಕಬಳ್ಳಾಪುರ: ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ- ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ 2020-21ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ₹10,000 ಶಿಷ್ಯವೇತನ ನೀಡಲಾಗುವುದು. ಅರ್ಜಿಗಳನ್ನು ಅಕಾಡೆಮಿಯ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು ಹಾಗೂ ಅಕಾಡೆಮಿ ಜಾಲತಾಣದಲ್ಲಿ https://karnatakasan geetanrityaaacademy.com ಮೂಲಕ ಪಡೆದು ಸಲ್ಲಿಸಬಹುದಾಗಿದೆ.

ಆಸಕ್ತರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.