ಮಧು ಸೀತಪ್ಪ
ಚಿಕ್ಕಬಳ್ಳಾಪುರ: ಕರ್ನಾಟಕ ನೀರಾವರಿ ವೇದಿಕೆ ಅಧ್ಯಕ್ಷ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಡಾ.ಮಧು ಸೀತಪ್ಪ (59) ಚೇಳೂರು ತಾಲ್ಲೂಕಿನ ಶಿವಪುರ ಬಳಿಯ ತಮ್ಮ ತೋಟದಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವೈದ್ಯರಾದ ಮಧು ಸೀತಪ್ಪ ಕೆಲ ಕಾಲ ಲಂಡನ್‌ನಲ್ಲಿಯೂ ಕೆಲಸ ಮಾಡಿದ್ದರು.
2023 ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಮಧು ಗುರುತಿಸಿಕೊಂಡಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಲು ಯತ್ನಿಸಿ ವಿಫಲರಾಗಿದ್ದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ನೀರಾವರಿ ಹೋರಾಟಗಳಲ್ಲಿಯೂ ತೊಡಗಿದ್ದರು. ಅವರ ಪತ್ನಿ ಮತ್ತು ಪುತ್ರ ಲಂಡನ್ ನಲ್ಲಿದ್ದು ಅವರು ಬಂದ ನಂತರ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.