ADVERTISEMENT

ಈಶಾ ರಸ್ತೆ; ಹಣ ವಸೂಲಿ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ರೈತರ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 13:49 IST
Last Updated 24 ಏಪ್ರಿಲ್ 2025, 13:49 IST
ರವೀಂದ್ರ
ರವೀಂದ್ರ   

ಚಿಕ್ಕಬಳ್ಳಾಪುರ: ಈಶಾ ಯೋಗ ಕೇಂದ್ರದ ಬಳಿ ರಸ್ತೆಗೆ ಯಾರಾದರೂ ಗೇಟ್‌ಗಳನ್ನು ಅಡ್ಡಹಾಕಿ ಹಣ ವಸೂಲಿ ಮಾಡುತ್ತಿದ್ದರೆ ಅದು ತಪ್ಪು. ಆ ರೀತಿಯಲ್ಲಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. 

ಈ ಹಿಂದೆಯೂ ಬ್ಯಾರಿಕೇಡ್ ಅಳವಡಿಸಿ ಹಣ ವಸೂಲಿ ಮಾಡುತ್ತಿದ್ದರು. ಆಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್ ಕಳುಹಿಸಿ ತೆರವುಗೊಳಿಸಿದ್ದೆ. ಈಗ ಮತ್ತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ನೀವು (ರೈತ ಸಂಘ) ತಿಳಿಸಿದ್ದೀರಿ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆಯುವೆ ಎಂದರು.

ADVERTISEMENT

ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಹಣ ವಸೂಲಿ ಮಾಡಿದರೆ ಅದು ತಪ್ಪು. ಪಂಚಾಯಿತಿ ಅವರಿಗೂ ಹಣ ವಸೂಲಿ ಮಾಡುವ ಅಧಿಕಾರ ಇಲ್ಲ. ಗೇಟ್‌ಗಳನ್ನು ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರೆ ತೆಗೆಸಲಾಗುವುದು ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.