ಇಸ್ರೇಲ್‌ನ ಟೆಲ್ ಅವೀವ್ ಪಟ್ಟಣ ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ ಕ್ಷಿಪಣಿಗಳನ್ನು ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆಯು ಹೊಡೆದುರುಳಿಸಿತು
– ಪಿಟಿಐ ಚಿತ್ರ
ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಏಳು ವಿದ್ಯಾರ್ಥಿಗಳು ಇರಾನ್ ರಾಜಧಾನಿ ಟೆಹರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ.
ಈ ಬಗ್ಗೆ ಗೌರಿಬಿದನೂರಿನ ಹಸನ್ ಸೈಯದ್ ಎಂಬುವವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಟ್ಯಾಗ್ ಮಾಡಿದ್ದಾರೆ.
ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಅವರನ್ನು ಸ್ಥಳಾಂತರಿಸಬೇಕಿದೆ ಎಂದು ಕೋರಿದ್ದಾರೆ.
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಸನ್ ಸೈಯದ್ ಅವರ 'ಎಕ್ಸ್' ಗಮನ ಸೆಳೆಯುತ್ತಿದೆ.
ಈ ಬಗ್ಗೆ ಪೊಲೀಸ್ ಇಲಾಖೆ ಅಥವಾ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ಸಹ ಲಭ್ಯವಾಗಿಲ್ಲ.
ಗೌರಿಬಿದನೂರು ತಾಲ್ಲೂಕು ಅಲೀಪುರ ಗ್ರಾಮದ ಹಬೀಬ್ ರಾಜಾ, ಶಬ್ಬೀರ್ ಅಲಿ, ಇಲ್ಹಾನ್ ಅಲಿ, ಇರ್ಫಾನ್ ಹೈದರ್, ರಾಜಾ ಅಬ್ಬಾಸ್, ಹಬೀಬ್ ಹುಸೇನ್, ನಕೀರ್ ರಾಜಾ ಅವರು ಟೆಹರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.