ADVERTISEMENT

ಜಾಲಾರಿ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 15:13 IST
Last Updated 9 ಮಾರ್ಚ್ 2020, 15:13 IST
ಜಾಲಾರಿ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಜಾಲಾರಿ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹನುಮಂತಪುರ ಬಳಿಯ ಜಾಲಾರಿ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಸೋಮವಾರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ 6 ರಿಂದ ಹೋಮ, ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು.

ಬ್ರಹ್ಮರಥೋತ್ಸವದಲ್ಲಿ ಹೂ ಹಣ್ಣು ಮತ್ತು ತೆಂಗಿನಕಾಯಿ ಅರ್ಪಿಸುವ ಮೂಲಕ ಭಕ್ತರು ಭಕ್ತಿ ಸಮರ್ಪಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಕುಟುಂಬ ಸದಸ್ಯರ ಸಮೇತ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು. ಜಾತ್ರೆ ಪ್ರಯುಕ್ತ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.