ADVERTISEMENT

ಕನಕ ಶ್ರೇಷ್ಠ ಸಂತ: ಕೆ. ಅರುಂಧತಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 7:14 IST
Last Updated 4 ಡಿಸೆಂಬರ್ 2020, 7:14 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ನಡೆಯಿತು
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ನಡೆಯಿತು   

ಶಿಡ್ಲಘಟ್ಟ: ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ತಹಶೀಲ್ದಾರ್ ಕೆ. ಅರುಂಧತಿ ಹೇಳಿದರು.

ಕನಕ ಜಯಂತಿ ಅಂಗವಾಗಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ದಾಸಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಕುಲ ಕುಲವೆಂದು ಹೊಡೆದಾಡಬೇಡಿ, ಕುಲಗಳು ಹುಟ್ಟಿದ್ದು ಎಲ್ಲಿ ಎಂಬುದನ್ನು ಅರ್ಥ ಮಾಡಿಕೊಂಡಿದ್ದಾದರೆ ಜಾತಿ ಸಂಘರ್ಷಗಳಿಗೆ ಅವಕಾಶ ವಿರುವುದಿಲ್ಲವೆಂದು ಕನಕದಾಸರು ಸಾರಿದ್ದಾರೆ. ಜನರ ಮನಸ್ಸಿನಲ್ಲಿ ಅಚ್ಚಳಿಯದೆ ನೆಲೆಸಿದ್ದಾರೆ. ಕನಕದಾಸರು ಕೇವಲ ದಾಸಶ್ರೇಷ್ಠರು ಮಾತ್ರವಲ್ಲದೇ ಅತ್ಯುತ್ತಮ ಸಾಹಿತಿ, ಕವಿ, ಗಾಯಕರಾಗಿದ್ದರು. ಜಾತಿ ನಿರ್ಮೂಲನೆ ಮಾಡುವಲ್ಲಿ ಶ್ರಮಿಸಿದಂತಹ ಮಹಾಪುರುಷರು. ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.

ADVERTISEMENT

ಸಮುದಾಯದವರಿಂದ ನಗರದ ಕೆಂಪಣ್ಣ ವೃತ್ತದಲ್ಲಿರುವ ಕನಕ ಭಜನೆ ಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.

ಶಿರಸ್ತೇದಾರ್ ಕೆ.ಎನ್. ಮಂಜುನಾಥ್, ರಾಜಸ್ವ ನಿರೀಕ್ಷಕ ಪ್ರಶಾಂತ್, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬರೆಡ್ಡಿ, ಸಮುದಾಯದ ಮುಖಂಡರಾದ ಎ. ನಾಗರಾಜ್, ಎಂ. ಗಣೇಶಪ್ಪ, ಎ. ರಾಮಚಂದ್ರಪ್ಪ, ಎಂ. ರಾಮಾಂಜಿನಪ್ಪ, ಮಂಜುಳಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.