ADVERTISEMENT

ಚಿಂತಾಮಣಿ ಹಿಂದೂ ಮುಸ್ಲಿಮರ ಸಾಮರಸ್ಯ ದೇಶಕ್ಕೆ ಮಾದರಿ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 4:12 IST
Last Updated 24 ನವೆಂಬರ್ 2022, 4:12 IST
ಚಿಂತಾಮಣಿಯಲ್ಲಿ ನಡೆದ ‘‍ಪಂಚರಥ’ ಯಾತ್ರೆಯ ರೋಡ್ ಶೋನಲ್ಲಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಂ.ಕೃಷ್ಣಾರೆಡ್ಡಿ ಪಾಲ್ಗೊಂಡಿದ್ದರು
ಚಿಂತಾಮಣಿಯಲ್ಲಿ ನಡೆದ ‘‍ಪಂಚರಥ’ ಯಾತ್ರೆಯ ರೋಡ್ ಶೋನಲ್ಲಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಂ.ಕೃಷ್ಣಾರೆಡ್ಡಿ ಪಾಲ್ಗೊಂಡಿದ್ದರು   

ಚಿಂತಾಮಣಿ:ಕೈವಾರ ತಾತಯ್ಯನವರ ಪವಿತ್ರ ಕ್ಷೇತ್ರದಿಂದ ಜಿಲ್ಲೆಯಲ್ಲಿ ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಸಮಾಜದಲ್ಲಿ ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಬದುಕಬೇಕು ಎನ್ನುವುದು ತಾತಯ್ಯನವರ ಆಶಯವಾಗಿತ್ತು. ಇಲ್ಲಿ ಹಿಂದೂ ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಶಾಂತಿಯ ಬದುಕನ್ನು ಕಟ್ಟಿಕೊಂಡು ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿಹೇಳಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ 65 ವರ್ಷ ದಾಟಿದ ನಾಗರಿಕರಿಗೆ ಮಾಸಿಕ ₹ 5 ಸಾವಿರ ಗೌರವಧನ ನೀಡುತ್ತದೆ. ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಾಗುವುದು.ವಿಧವೆಯರು ಮತ್ತು ಅಂಗವಿಕಲರಿಗೆ ಮಾಸಾಶನವನ್ನು ₹ 2,500ಕ್ಕೆ ಹೆಚ್ಚಿಸಲಾಗುವುದು ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸ್ತ್ರೀಶಕ್ತಿ ಸಂಘಗಳನ್ನು ಚುನಾವಣೆಗೆ ಮಾತ್ರ ಬಳಸಿಕೊಳ್ಳುತ್ತವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಿದರೆ ಸಾಲ ಮನ್ನಾ ಜತೆಗೆ ಮಹಿಳೆಯರು ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಳ್ಳಲು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.